New KAS prelims batch starts from 6th August 2018 - For registration Contact: 9686664983/9845512052. Admission Open for Universal School of Admission (B.A & B.com with IAS/KAS Integrated Coaching) Contact - 9686664985/080-46568844

ನ್ಯಾಯಮೂರ್ತಿಗಳ ವೇತನ- ಪಿಂಚಣಿ ಪರಿಷ್ಕರಣೆಗೆ ಅಸ್ತು

ನ್ಯಾಯಮೂರ್ತಿಗಳ ವೇತನ- ಪಿಂಚಣಿ ಪರಿಷ್ಕರಣೆಗೆ ಅಸ್ತು

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ವೇತನ, ಗ್ರಾಚ್ಯುಯಿಟಿ, ಭತ್ಯೆಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ನಾಗರಿಕ ಸೇವಾ ಅಧಿಕಾರಿಗಳ ವೇತನವನ್ನು 7ನೇ ವೇತನ ಆಯೋಗದ ಶಿಫಾರಸ್ಸಿಗೆ ಅನುಗುಣವಾಗಿ ಪರಿಷ್ಕರಿಸಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ವೇತನ, ಗ್ರಾಚ್ಯುಯಿಟಿ, ಭತ್ಯೆಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಲು ಕೂಡಾ ನಿರ್ಧರಿಸಲಾಗಿದೆ.

ಪ್ರಮುಖ ಅಂಶಗಶಳು

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ವೇತನ, ಗ್ರಾಚ್ಯುಯಿಟಿ, ಭತ್ಯೆಗಳು ಮತ್ತು ಪಿಂಚಣಿಯನ್ನು ಪರಿಷ್ಕರಣೆ ಮಾಡಿರುವುದರಿಂದ ಭಾರತದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂಕೋರ್ಟ್ 31 ಮಂದಿ ನ್ಯಾಯಮೂರ್ತಿಗಳು ಹಾಗೂ ಎಲ್ಲ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ 1079 ಮಂದಿ ಹೈಕೊರ್ಟ್ ನ್ಯಾಯಮೂರ್ತಿಗಳ ವೇತನ ಮತ್ತು ಭತ್ಯೆಗಳು ಹೆಚ್ಚಳವಾಗಲಿವೆ. ಸುಮಾರು 2500 ಮಂದಿ ನಿವೃತ್ತ ನ್ಯಾಯಮೂರ್ತಿಗಳಿಗೂ ಇದು ಅನ್ವಯಿಸಲಿದೆ.

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಇದಕ್ಕೆ ಪೂರಕವಾಗಿ ಎರಡು ಕಾಯ್ದೆಗಳಿಗೆ ತಿದ್ದುಪಡಿ ತರಲು ಹಾದಿ ಸುಗಮವಾದಂತಾಗಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ (ವೇತನ ಹಾಗೂ ಸೇವಾ ಸ್ಥಿತಿಗತಿ) ಕಾಯ್ದೆ- 1958 ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ (ವೇತನ ಹಾಗೂ ಸೇವಾ ಸ್ಥಿತಿಗತಿ) ಕಾಯ್ದೆ- 1954ಕ್ಕೆ ಅಗತ್ಯ ತಿದ್ದುಪಡಿ ತರಲಾಗುತ್ತದೆ. ಎರಡು ಕಾಯ್ದೆಗಳು ದೇಶದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು, ಎಲ್ಲ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ವೇತನ ಹಾಗೂ ಭತ್ಯೆಗಳನ್ನು ನಿರ್ಧರಿಸುತ್ತದೆ. ಸರ್ಕಾರವು ಮುಂದಿನ ಅಧಿವೇಶನದಲ್ಲಿ ಸಂಬಂಧದ ತಿದ್ದುಪಡಿ ಮಸೂದೆಗಳನ್ನು ಮಂಡಿಸಲಿದೆ. ಇದಕ್ಕೆ ಅನುಮೋದನೆ ಸಿಕ್ಕಿದ ಬಳಿಕ ವೇತನಗಳು ಹಾಗೂ ಭತ್ಯೆಗಳು ಪರಿಷ್ಕರಣೆಯಾಗಲಿವೆ.

ಹಿನ್ನೆಲೆ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪ್ರಸ್ತುತ ವೇತನ ಹಾಗೂ ಭತ್ಯೆಗಳಿಂದ 1.5 ಲಕ್ಷ ರೂಪಾಯಿ ವೇತನವನ್ನು ಎಲ್ಲ ಕಡಿತಗಳ ಬಳಿಕ ಪಡೆಯುತ್ತಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿಗಳು ಇದಕ್ಕಿಂತ ಹೆಚ್ಚಿನ ವೇತನ ಹಾಗೂ ಭತ್ಯೆ ಪಡೆಯುತ್ತಾರೆ. ಹೈಕೋರ್ಟ್ ನ್ಯಾಯಮೂರ್ತಿಗಳ ವೇತನ ಇದಕ್ಕಿಂತ ಕಡಿಮೆ. ಇದರ ಜತೆಗೆ ನ್ಯಾಯಮೂರ್ತಿಗಳಿಗೆ ಬಾಡಿಗೆ ರಹಿತ ವಸತಿ ಸೌಲಭ್ಯವನ್ನು ಸೇವಾ ಅವಧಿಯ ಉದ್ದಕ್ಕೂ ಒದಗಿಸಲಾಗುತ್ತದೆ. ಏಳನೇ ವೇತನ ಆಯೋಗದ ಶಿಫಾರಸ್ಸಿನ ಬಳಿಕ, ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲಾಗಿತ್ತು. ಇದಕ್ಕೆ ಅನುಗುಣವಾಗಿ ನ್ಯಾಯಮೂರ್ತಿಗಳ ವೇತನವನ್ನು ಕೂಡಾ ಹೆಚ್ಚಿಸಲು ನಿರ್ಧರಿಸಲಾಗಿತ್ತು.

Comment