IAS Prelims and Mains New Batch starts from September 20th 2018 & KAS prelims & Mains New batch starts from 27th September 2018 - For registration Contact: 9686664983/9845512052.

ಭಾರತದ ಮೊಟ್ಟಮೊದಲ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಆಂಧ್ರಪ್ರದೇಶದಲ್ಲಿ ಸ್ಥಾಪನೆ

ಭಾರತದ ಮೊಟ್ಟಮೊದಲ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಆಂಧ್ರಪ್ರದೇಶದಲ್ಲಿ ಸ್ಥಾಪನೆ

ಭಾರತದ ಮೊಟ್ಟಮೊದಲ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಆಂಧ್ರಪ್ರದೇಶದಲ್ಲಿ ಸ್ಥಾಪನೆಯಾಗಲಿದೆ. ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್, ಮೊಬೈಲ್ ಮತ್ತು ಪೂರಕ ಸಾಧನಗಳ ಉತ್ಪಾದನೆಗೆ ಅಗತ್ಯ ಸೌಲಭ್ಯಗಳು ಹಾಗೂ ಮೂಲಸೌಕರ್ಯಗಳನ್ನು ಒದಗಿಸಿಕೊಡುವ ರೀತಿಯಲ್ಲಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಕ 2012ರಲ್ಲಿ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಸ್ಥಾಪನೆ ಮಾಡುವುದಾಗಿ ಘೋಷಿಸಿತ್ತು. ಇಂಥ ಕ್ಲಸ್ಟರ್ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿ, ಬಜೆಟ್ನಲ್ಲಿ ಘೋಷಣೆ ಮಾಡಿತ್ತು.

ಪ್ರಮುಖ ಅಂಶಗಳು

2015ರಲ್ಲಿ ಆಂಧ್ರಪ್ರದೇಶ ಸರ್ಕಾರವು ಮೊಟ್ಟಮೊದಲ ವಿಶೇಷವಾಗಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಕ್ಲಸ್ಟರ್ ಆರಂಭಿಸುವ ಯೋಜನೆಯನ್ನು ಪ್ರಕಟಿಸಿತ್ತು. ಹೊಸ ರಾಜಧಾನಿಯಾದ ಅಮರಾವತಿಯಲ್ಲಿ ಇದನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದಾಗಿ ಘೋಷಿಸಿತ್ತು. ರಾಜ್ಯ ಸರ್ಕಾರ ಇದಕ್ಕಾಗಿ 113.27 ಎಕರೆ ಜಾಗವನ್ನು ಮಂಜೂರು ಮಾಡಿದ್ದು, ಇದರಲ್ಲಿ ಹೊಸ ಉತ್ಪಾದನಾ ಸಂಕೀರ್ಣ ಅಭಿವೃದ್ಧಿಪಡಿಸಲು ನಿರ್ಧರಿಸಿತ್ತು. ಆಂಧ್ರಪ್ರದೇಶ ಕೈಗಾರಿಕಾ ಮೂಲಸೌಕರ್ಯ ನಿಗಮದ ಮೂಲಕ ಇದನ್ನು ಜಾರಿಗೆ ತರಲು ಉದ್ದೇಶಿಸಿತ್ತು.

ಇದಕ್ಕಾಗಿ ವಿಶೇಷ ಉದ್ದೇಶದ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ ಇದಕ್ಕೆ ವೆಂಕಟೇಶ್ವರ ಮೊಬೈಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನಾ ಹಬ್ ಪ್ರೈವೇಟ್ ಲಿಮಟೆಡ್ ಎಂದು ಹೆಸರಿಸಿತ್ತು. 2015ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಎಸ್ಪಿವಿ ಕಂಪನಿಯು ಕೇಂದ್ರ ಸರ್ಕಾರಕ್ಕೆ ಅಂತಿಮ ಯೋಜನೆಯ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಿತ್ತು. ಭಾರತದ ಮೂರು ಪ್ರಮುಖ ಮೊಬೈಲ್ ಉತ್ಪಾದಕ ಕಂಪನಿಗಳಾದ ಸೆಲ್ಕಾನ್, ಕಾರ್ಬನ್ ಮತ್ತು ಲಾವಾ ತಮ್ಮ ಘಟಕಗಳನ್ನು ನೂತನ ಕ್ಲಸ್ಟರ್ನಲ್ಲಿ ಸ್ಥಾಪಿಸಲು ಮುಂದಾಗಿವೆ.

ಇದರ ಜತೆಗೆ ಒಂದು ಆಂಕರ್ ಘಟಕವನ್ನು ಸೆವೆನ್ ಹಿಲ್ಸ್ ಡಿಜಿಟಲ್ ಪಾರ್ಕ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಮೂರು ಕಂಪನಿಗಳು ಆರಂಭಿಸಲಿವೆ. ಇದು ಮೊಬೈಲ್ ಫೋನ್ಗಳ ಬಿಡಿಭಾಗಗಳ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಲಿದ್ದು, ಇತರ ಸಂಬಂಧಿತ ಎಲೆಕ್ಟ್ರಾನಿಕ್ ಸಾಧನಗಳನ್ನೂ ಇದು ಉತ್ಪಾದಿಸಲಿದೆ. ಎಲೆಕ್ಟ್ರಾನಿಕ್ ಉತ್ಪಾದನಾ ಸಂಕೀರ್ಣವು ವಾರ್ಷಿಕ 50 ಸಾವಿರ ಉದ್ಯೋಗ ಸೃಷ್ಟಿಸಲಿದೆ.

Comment