IAS Prelims and Mains New Batch starts from September 20th 2018 & KAS prelims & Mains New batch starts from 27th September 2018 - For registration Contact: 9686664983/9845512052.

2017ರ ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿಯಲ್ಲಿ 137ನೇ ಸ್ಥಾನ ಪಡೆದ ಭಾರತ

2017ರ ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿಯಲ್ಲಿ 137ನೇ ಸ್ಥಾನ ಪಡೆದ ಭಾರತ

2017 ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಭಾರತ 137ನೇ ಸ್ಥಾನದಲ್ಲಿದೆ. ಕಾನೂನು ಸುವ್ಯವಸ್ಥೆ ಬಲಪಡಿಸಿರುವುದರಿಂದ ಹಿಂಸಾತ್ಮಕ ಅಪರಾಧಗಳ ಪ್ರಮಾಣ ಕಡಿಮೆಯಾಗಿದೆ. ಇದರಿಂದಾಗಿ, 141ನೇ ಸ್ಥಾನದಲ್ಲಿದ್ದ ಭಾರತ ನಾಲ್ಕು ಸ್ಥಾನಗಳ ಸುಧಾರಣೆ ಕಂಡಿದೆ. 2008ರಿಂದಲೂ ಅತ್ಯಂತ ಶಾಂತಿಯುತ ರಾಷ್ಟ್ರವಾಗಿದ್ದ ಐಸ್ಲ್ಯಾಂಡ್ ಈಗಲೂ ಅದೇ ಸ್ಥಾನವನ್ನು ಕಾಪಾಡಿಕೊಂಡಿದೆ. ನ್ಯೂಜಿಲೆಂಡ್, ಆಸ್ಟ್ರಿಯಾ, ಪೋರ್ಚುಗಲ್ ಹಾಗೂ ಡೆನ್ಮಾರ್ಕ್ ನಂತರದ ಸ್ಥಾನಗಳಲ್ಲಿವೆ. ಶಾಂತಿ ಕಾಯ್ದುಕೊಳ್ಳುವಲ್ಲಿ ಅತ್ಯಂತ ಕೆಳಗಿರುವುದು ಸಿರಿಯಾ. ಇದು ಕಳೆದ ಐದು ವರ್ಷಗಳಿಂದಲೂ ಇದೇ ಸ್ಥಾನದಲ್ಲಿದೆ. ನಂತರದ ನಾಲ್ಕು ಸ್ಥಾನಗಳಲ್ಲಿ ಕ್ರಮವಾಗಿ ಅಫ್ಗಾನಿಸ್ತಾನ, ದಕ್ಷಿಣ ಸೂಡಾನ್‌, ಇರಾಕ್ಮತ್ತು ಸೊಮಾಲಿಯಾ ಇವೆ.

Comment